ವಚನ - 265     
 
ದೊರೆವ ಜೀತಕೆ ದುಡಿತ, ಮರುದಿನದ ಚಿಂತೆ ಮಿತ | ಹೊರೆಯ ಹಗುರಾಗಿಸುವ ಕೆಳೆಯರೊಡನಾಟ || ಸರಳತೆಯ ಪರಿತುಷ್ಟಿ, ಪರಮಾರ್ಥ ದೃಷ್ಟಿಯಿವು | ಸರಿಗೂಡೆ ಸುಕೃತವದು – ಮಂಕುತಿಮ್ಮ || ಕಗ್ಗ ೨೬೫ ||