ವಚನ - 687     
 
ಅಣಗಿದ್ದು ಬೇಸಗೆಯೊಳ್, ಎದ್ದು ಮಳೆ ಕರೆದಂದು | ಗುಣಿಯೆನದೆ ತಿಟ್ಟೆನದೆ ಸಿಕ್ಕಿದೆಡೆ ಬೆಳೆದು || ಉಣಿಸನೀವನು ದನಕೆ, ತಣಿವನೀವನು ಜಗಕೆ | ಗುಣಶಾಲಿ ತೃಣಸಾಧು – ಮಂಕುತಿಮ್ಮ || ಕಗ್ಗ ೬೮೭ ||