ವಚನ - 728     
 
ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು | ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು || ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ | ಸತತ ಕೃಷಿಯೋ ಪ್ರಕೃತಿ – ಮಂಕುತಿಮ್ಮ || ಕಗ್ಗ ೭೨೮ ||